INFO:
ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ಡಿಕ್ಕಿ ಹೊಡೆದಿದ್ದು, ಸಣ್ಣ ಪ್ರಮಾಣದ ಬೆಂಕಿ ಹೊತ್ತಿಕೊಂಡಿತ್ತು. ಸೋಮವಾರ ಕುವೈತ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಕಟ್ಟಡದಿಂದ ಹೊಗೆ ಕಂಡುಬಂದಿತ್ತು.
Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ - Kannada News | Drone Strike Reportedly Targets US Consulate in Dubai, Blast Captured on Video | TV9 Kannada