Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
ಅಮೆರಿಕ –ಇಸ್ರೇಲ್‌ ಮತ್ತು ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ದೇಶದ ಹಲವು ನಗರಗಳಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳ (LPG cylinders) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವುದರ ಜತೆಗೆ ವಿತರಣೆಯಲ್ಲಿ ತಾತ್ಕಾಲಿಕ ಅಡಚಣೆ ಎದುರಾಗುತ್ತಿದೆ. ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲ ಕರ್ನಾಟಕದ ಮುಜುರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಸಹ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದೆ.
ಕರ್ನಾಟಕದ ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಎದುರಾಯ್ತು ಗ್ಯಾಸ್ ಸಮಸ್ಯೆ - Kannada News | Karnataka Muzrai Department Temples Faces gas cylinder Problem Says Minister Ramalinga Reddy | TV9 Kannada