INFO:
ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದರು. ಗುವಾಹಟಿ (ಕಾಮಾಕ್ಯ) ಹಾಗೂ ಹೌರಾ ನಡುವಿನ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಆಗಿ ಹಸಿರು ನಿಶಾನೆ ತೋರಿದರು. ಆಧುನಿಕ ಭಾರತದ ಸಾರಿಗೆ ಅಗತ್ಯಗಳನ್ನು ಪೂರೈಸಲು ಆಧುನಿಕ ಸೌಲಭ್ಯಗಳೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲನ್ನು ತಯಾರಿಸಲಾಗಿದೆ. ಇದು ಸಂಪೂರ್ಣ ಹವಾನಿಯಂತ್ರಿತ ಸ್ಲೀಪರ್ ರೈಲು ಆಗಿದ್ದು, ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ವಿಮಾನಯಾನದಂತಹ ಅನುಭವವನ್ನು ನೀಡುತ್ತದೆ.
Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ - Kannada News | PM Narendra Modi flags off Indias first Vande Bharat sleeper train in Malda  | TV9 Kannada