Loading the player...


INFO:
ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ​​​ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಒಡಂಬಡಿಕೆ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಹೂಡಿಕೆ ಎಷ್ಟು,ಕರ್ನಾಟಕದಲ್ಲಿ ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ!ಸಿದ್ದರಾಮಯ್ಯ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ - siddaramaiah witnesses historic deal volvo pledges 1 400 crore investment in karnataka - vijaykarnataka