Loading the player...


INFO:
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೋಲಾರದಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರಚಾರ ಭಾಷಣದ ವೇಳೆ ಮೋದಿ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆ ಬಗ್ಗೆ ದಾಖಲಾಗಿದ್ದ ಪ್ರಕರಣದಲ್ಲಿ ಅವರಿಗೆ 2 ವರ್ಷ ಶಿಕ್ಷೆಯಾಗಿದೆ. ಸೂರತ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಬೇಕೆಂದು ಗುಜರಾತ್ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಯವರು ಸಲ್ಲಿಸಿದ್ದ ಮೇಲ್ಮನವಿಯನ್ನು ಜು. 17ರಂದು ನ್ಯಾಯಾಲಯ ತಳ್ಳಿಹಾಕಿದೆ. ಇದರ ಹಿಂದೆ ಬಿಜೆಪಿ ಷಡ್ಯಂತ್ರವಿದೆಯೆಂದು ಆರೋಪಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ರಾಹುಲ್ ವಿರುದ್ಧ ಗುಜರಾತ್ ಹೈಕೋರ್ಟ್ ತೀರ್ಪು: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - congress will protest against bjp as verdict of gujarat high court against rahul gandhi in modi surname case - vijaykarnataka