Loading the player...


INFO:
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಬೆಂಬಲಿಸಿದ್ದಕ್ಕಾಗಿ ತಮ್ಮದೇ ಪಕ್ಷವಾದ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿರುವ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್, "ರಾಷ್ಟ್ರದ ಹಿತಾಸಕ್ತಿಯ ವಿಷಯದಲ್ಲಿ ತಾವು ನೀಡಿದ ಹೇಳಿಕೆಗಳಿಗೆ ಈಗಲೂ ಮತ್ತು ಮುಂದೆಯೂ ಬದ್ಧ" ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ದೇಶದ ಹಿತಾಸಕ್ತಿಯ ವಿಷಯದಲ್ಲಿ ಒಂದೇ ಧ್ವನಿಯಲ್ಲಿ ಮಾತನಾಡಬೇಕು ಎಂದೂ ಶಶಿ ತರೂರ್‌ ಇದೇ ವೇಳೆ ಆಗ್ರಹಿಸಿದ್ದಾರೆ.
ರಾಷ್ಟ್ರ ಮೊದಲು ಪಕ್ಷ ನಂತರ ಎಂದ ಶಶಿ ತರೂರ್‌,ಭಾರತ ನಾಶವಾದರೆ ಯಾರು ಬದುಕುತ್ತಾರೆ? ನನ್ನ ನಿಷ್ಠೆ ಏನಿದ್ದರೂ.. ವಿದ್ಯಾರ್ಥಿಯ ಪ್ರಶ್ನೆಗೆ ಶಶಿ ತರೂರ್‌ ನೇರ ಉತ್ತರ! - nation is my first priority shashi tharoor stands firm on pro government remarks amid rift with congress - vijaykarnataka