Loading the player...


INFO:
ಉಗ್ರರನ್ನು ಮಟ್ಟ ಹಾಕುವ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿ, ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯವಾಗಿದೆ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಪಹಲ್ಗಾಮ್ ದಾಳಿಯಲ್ಲಿ ಕನ್ನಡಿಗರ ಸಾವು,ಉಗ್ರರನ್ನು ಮಟ್ಟ ಹಾಕುವ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲ: ಕೇಂದ್ರಕ್ಕೆ ಸಿದ್ದರಾಮಯ್ಯ ಭರವಸೆ - karnataka government will help central government to control terrorism - vijaykarnataka