Loading the player...


INFO:
ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿದ್ದು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿಯಾಗಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 16ರವರಗೆೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯಿಂದ ಕೂಡಿದ ಮಳೆ ಸುರಿಯುವ ಸಂಭವ ಇದೆ ಎಂದು ತಿಳಿಸಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 7 ಮನೆಗಳಿಗೆ ಹಾನಿಯಾಗಿದೆ.
ಮುಂಗಾರು ಮಳೆ ಚುರುಕು,ರಾಜ್ಯ ಕರಾವಳಿಯಲ್ಲಿ 4 ದಿನ ನಿರಂತರ ಮಳೆ; ದಕ್ಷಿಣ ಕನ್ನಡ, ಉಡುಪಿಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ - yellow alert in coastal districts of dakshina kannada and udupi till june 16th - vijaykarnataka