Loading the player...


INFO:
ಶಿರಸಿ-ಕುಮಟಾ ಹಾಗೂ ಶಿರಸಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 766 ರಸ್ತೆಗಳು ಹದಗೆಟ್ಟಿವೆ. ಸಾಗರ ಮಾಲಾ ಯೋಜನೆಯಡಿ ಅಭಿವೃದ್ಧಿ ನಡೆಯುತ್ತಿದ್ದರೂ ರಸ್ತೆಗಳು ಗುಂಡಿಗಳಿಂದ ತುಂಬಿವೆ. ದೇವಿಮನೆ ಘಟ್ಟದಲ್ಲಿ ಪದೇ ಪದೇ ಗುಡ್ಡ ಕುಸಿತದಿಂದ ಸಂಚಾರಕ್ಕೆ ತೊಂದರೆಯಾಗಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ತವರಲ್ಲೇ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯವಹಿಸಿದೆ ಎಂದು ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
National highway 766 which connects Sirsi to kumta - Hubballi full of potholes in Uttara Kannada district